
ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗಲಿದ್ದು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ.
2025-26 ಹಣಕಾಸು ವರ್ಷದಲ್ಲಿ ವಾರ್ಷಿಕ 6.3-6.8% ದರದಲ್ಲಿ ಜಿಡಿಪಿ ಬೆಳವಣಿಗೆಯಾಬಹುದು ಎಂದು ಆರ್ಥಿಕ ಸಮೀಕ್ಷೆ ತಿಳಿಸಿದ್ದು 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಇಳಿಕೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗುವ ಸಾಧ್ಯತೆಯಿದೆ.
ಈ ಬಾರಿಯ ಬಜೆಟ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3ರಿಂದ 5 ಲಕ್ಷ ಹೆಚ್ಚಿಸುವ ಸಾಧ್ಯತೆಯಿದ್ದು ಕೃಷಿ ಮೂಲಸೌಕರ್ಯದಲ್ಲಿನ ಹೂಡಿಕೆಗಳಿಗೆ ಆದ್ಯತೆ ಸಿಗಲಿದೆ.
ಮಹಿಳೆಯರ ಆರೋಗ್ಯ ಸುಧಾರಣೆಗೆ ಅನುದಾನ ಹೆಚ್ಚಿಸುವ ಸಾಧ್ಯತೆಯಿದ್ದು
ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣ, ಗ್ರಾಮೀಣ ಮಹಿಳೆಯರ ಆರೋಗ್ಯ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ, ಉಚಿತ ಲಸಿಕೆಗಳನ್ನು ಒದಗಿಸುವ ಯೋಜನೆ, ಉದ್ಯಮ ಸ್ಥಾಪಿಸಲು ಸುಲಭ ಸಾಲದ ಸೌಲಭ್ಯ, ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ, ಮಹಿಳೆಯರಲ್ಲಿ ಉಳಿತಾಯ ಮತ್ತು ಹೂಡಿಕೆಯಲ್ಲಿ ಪ್ರೋತ್ಸಾಹ ನೀಡುವುದು, ಮುಟ್ಟಿನ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆಯಂತಹ ಆರೋಗ್ಯ ಯೋಜನೆ ಸೇರಿದಂತೆ ಲಕ್ ಪತಿ ದೀದಿ, ಡ್ರೋಣ್ ದೀದಿ ಯೋಜನೆ ಇನ್ನಷ್ಟು ವಿಸ್ತರಿಸುವ ಸಾಧ್ಯತೆಯಿದೆ.





















