
ಮೈಸೂರು: ವಯೋಸಹಜ ಕಾರಣಗಳಿಂದಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ತಿಳಿಸಿದ್ದಾರೆ. ಸದ್ಯ ತನಗೆ 80 ವರ್ಷ ವಯಸ್ಸಾಗಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿರುವುದಾಗಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಮೊದಲಿನಂತೆ ಓಡಾಡಲು ಸಾಧ್ಯವಾಗದ ಕಾರಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಇತರರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡವಾಗಿ ತೆರಳಿದ್ದರಿಂದ ಖಾಲಿ ಇದ್ದ ಕುರ್ಚಿಯಲ್ಲಿ ಕುಳಿತಿದ್ದೆ. ಇದರಲ್ಲಿ ಯಾವುದೇ ಕಡೆಗಣನೆಯಿಲ್ಲ. ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದರು.























































































