31 C
Udupi
Sunday, May 3, 2026
spot_img
spot_img
HomeBlog9ನೇ ತರಗತಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಪರೀಕ್ಷೆ ಜಾರಿಗೊಳಿಸಲು ನಿರ್ಧರಿಸಿದ ಸಿಬಿಎಸ್ಇ

9ನೇ ತರಗತಿ ವಿದ್ಯಾರ್ಥಿಗಳಿಗೆ ಓಪನ್ ಬುಕ್ ಪರೀಕ್ಷೆ ಜಾರಿಗೊಳಿಸಲು ನಿರ್ಧರಿಸಿದ ಸಿಬಿಎಸ್ಇ

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯು ಮಹತ್ವದ ನಿರ್ಧಾರ ಕೈಗೊಂಡಿದ್ದು ಅದೇನಂದರೆ ಮಕ್ಕಳ ಟೆನ್ಷನ್‌ ಪರಿಹರಿಸುವ ಸಲುವಾಗಿ 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ ಪರೀಕ್ಷೆ ಜಾರಿಗೊಳಿಸಲು ನಿರ್ಧಾರಿಸಿದೆ.

ಈ ಹೊಸ ನೀತಿ ಜಾರಿಯಾದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಹಳೆಯ ಪರೀಕ್ಷಾ ಪದ್ಧತಿ ಕಂಠ ಪಾಠಕ್ಕೆ ಸಮಯ ಕೊಡುತ್ತೆ ಅನ್ನೋ ವಾದ ಇತ್ತು. ಈಗಿನ ಹೊಸ ಪರೀಕ್ಷಾ ಪದ್ಧತಿ ವಿದ್ಯಾರ್ಥಿ ಸಾಮರ್ಥ್ಯವನ್ನ ಗಣನೆಗೆ ತೆಗೆದುಕೊಳ್ಳುತ್ತದೆ. ಇಂತಹ ಕ್ರಮ ಆಯ್ಕೆ ಮಾಡುವ ಅನುಸರಿಸುವ ಹಕ್ಕು ಆಯಾ ಶಾಲೆಗಳಿಗೆ ಬಿಟ್ಟಿರುತ್ತದೆ. ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು -2023 ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಮನ್ವಯದೊಂದಿಗೆ ಹೊಸ ಪಠ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.

ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಹೊಸ ನೀತಿಯು ಸಾಮರ್ಥ್ಯ ಆಧಾರಿತ ಕಲಿಕೆಗೆ ಮಹತ್ವ ಕೊಡುತ್ತದೆ. ಮುಖ್ಯ ಕಲಿಕಾ ವಿಷಯಗಳಾದ ಭಾಷೆ, ಗಣಿತ, ವಿಜ್ಞಾನ ಸಮಾಜ ವಿಜ್ಞಾನವನ್ನು ಇದು ಒಳಗೊಳ್ಳಲಿದೆ. ಈ ಕ್ರಮವನ್ನು ಆಯ್ಕೆ ಮಾಡಿಕೊಳ್ಳುವ ಅಥವಾ ಬಿಡುವ ಸ್ವಾತಂತ್ರ್ಯವನ್ನು ಶಾಲೆಗಳಿಗೆ ನೀಡಲಾಗಿದೆ.

-ಸಿಬಿಎಸ್‌ಇ ( CBSE) ತೆರೆದ ಪುಸ್ತಕ ಮೌಲ್ಯಮಾಪನ ಸ್ವರೂಪವು ಭಾಷೆಗಳು, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದಂತಹ ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ.

-ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳು, ತರಗತಿ ಟಿಪ್ಪಣಿಗಳು ಮತ್ತು ಇತರ ಅನುಮೋದಿತ ಸಂಪನ್ಮೂಲಗಳನ್ನು ಉಲ್ಲೇಖಿಸಬಹುದು.

-ಈ ಸ್ವರೂಪವನ್ನು ಅಳವಡಿಸಿಕೊಳ್ಳಬೇಕೋ ಅಥವಾ ಬೇಡವೋ ಎಂಬುದು ಶಾಲೆಗಳಿಗೆ ಬಿಟ್ಟದ್ದು, ಅದು ಒಂದು ಆಯ್ಕೆಯಾಗಿರುತ್ತದೆ ಎಂದು CBSE ಹೇಳಿದೆ. ಪ್ರತಿ ಶೈಕ್ಷಣಿಕ ಅವಧಿಯಲ್ಲಿ ನಡೆಸುವ ಮೂರು ಪೆನ್ನು-ಪೇಪರ್ ಪರೀಕ್ಷೆಗಳ ಭಾಗವಾಗಿ ಮೌಲ್ಯಮಾಪನ ಇರುತ್ತದೆ.

-CBSE ಪರೀಕ್ಷೆಗಳು ವರ್ಷಕ್ಕೆ 2 ಬಾರಿ ನಡೆಯಲಿವೆ ಎಂದು ಕೆಲವು ತಿಂಗಳ ಹಿಂದೆಯೇ ಘೋಷಿಸಲಾಗಿತ್ತು.

-ಈ ಎರಡನೇ ಹಂತದ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಸಿಬಿಎಸ್‌ಇ ತಿಳಿಸಿದೆ. ಎರಡನೇ ಹಂತದ ಪರೀಕ್ಷೆ ವಿಶೇಷವಾಗಿ ಸುಧಾರಣೆಗಾಗಿ ಇರುತ್ತದೆ.

ತೆರೆದ ಪುಸ್ತಕ ಪರೀಕ್ಷೆಯ ಉಪಯೋಗಗಳು:

ಇದರಿಂದ ಮಕ್ಕಳು ಪರೀಕ್ಷೆಯ ಸಮಯದಲ್ಲಿ ನೀಡಲಾದ ಪುಸ್ತಕಗಳು ಹಾಗೂ ಟಿಪ್ಪಣಿಗಳನ್ನು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ತೋರಿಸಿ ಇದು ಅವರ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ. ಈ ಪರೀಕ್ಷೆಯೂ ಕಂಠಪಾಠದ ಬದಲು ಅನ್ವಯಿಸುವ ಹಾಗೂ ವಿಶ್ಲೇಷಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page