33.2 C
Udupi
Thursday, April 23, 2026
spot_img
spot_img
HomeBlogರಾಜ್ಯಪಾಲರ ತಾರತಮ್ಯ ಧೋರಣೆ ಖಂಡಿಸಿ ರಾಜಭವನ ಚಲೋಗೆ ಕಾಂಗ್ರೆಸ್ ಕರೆ

ರಾಜ್ಯಪಾಲರ ತಾರತಮ್ಯ ಧೋರಣೆ ಖಂಡಿಸಿ ರಾಜಭವನ ಚಲೋಗೆ ಕಾಂಗ್ರೆಸ್ ಕರೆ

ಇಂದು ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಭವಿಷ್ಯ

ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸದ್ಯ ಪ್ರಾಸಿಕ್ಯೂಷನ್ ಫೈಟ್ ತಾರಕಕ್ಕೇರಿದೆ. ರಾಜ್ಯಪಾಲರ ವಿರುದ್ಧ ಕಾನೂನು ಸಮರ ನಡೆಸುತ್ತಿರುವ ಕೈ ಪಡೆ ಇದೀಗ ರಾಜ್ಯಪಾಲರ ವಿರುದ್ಧ ಬೀದಿಗಿಳಿಯಲು ಮುಂದಾಗಿದ್ದು ಇಂದು ರಾಜ್ಯ ರಾಜಧಾನಿಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಇಡೀ ಕಾಂಗ್ರೆಸ್ ಪಡೆ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿ ರಾಜಭನವ ಚಲೋಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕರು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಮೆರವಣಿಗೆ ಸಜ್ಜಾಗಿದ್ದು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿ ಅರ್ಜಿಗಳು ರಾಜ್ಯಪಾಲರ ಮುಂದೆ ಬಾಕಿ ಇವೆ. ಹೀಗಾಗಿ ಪಕ್ಷಪಾತಿ ಧೋರಣೆ ಬಿಟ್ಟು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ರಾಜ್ಯಪಾಲರ ಮೇಲೆ ಒತ್ತಡ ಹಾಕಲು ಕಾಂಗ್ರೆಸ್‌ ಮುಂದಾಗಿದೆ. ರಾಜಭವನದ ಚಲೋದಲ್ಲಿ ಕಾಂಗ್ರೆಸ್ನ ಎಲ್ಲ ಶಾಸಕರು, ಸಂಸದರು, ಎಂಎಲ್ಸಿಗಳು, ಸಚಿವರು, ರಾಜ್ಯಸಭಾ ಸದಸ್ಯರು ಪಾಲ್ಗೊಳ್ಳಬೇಕೆಂದು ಡಿಸಿಎಂ ಡಿಕೆಶಿ ಸೂಚಿಸಿದ್ದಾರೆ.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಮತ್ತೆ ಕೈಗೆತ್ತಿಕೊಳ್ಳಲಿದ್ದು ಈಗಾಗಲೇ ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಇವತ್ತು ರಾಜ್ಯಪಾಲರ ಪರ ತುಷಾರ್ ಮೆಹ್ತಾ ವಾದಿಸಲಿದ್ದು ಒಂದು ವೇಳೆ ಹೈಕೋರ್ಟ್ನಲ್ಲಿ ಹಿನ್ನಡೆಯಾದ್ರೆ ಸುಪ್ರೀಂಕೋರ್ಟ್ನಲ್ಲೂ ಕಾನೂನು ಕದನಕ್ಕೆ ಸಿಎಂ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page