
ಶಾಲಾ ಶಿಕ್ಷಣ ಇಲಾಖೆ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಡೋನ್ ಬೋಸ್ಕೋ ಆಂಗ್ಲ ಮಾಧ್ಯಮ ಶಾಲೆ ಮುಲ್ಲಡ್ಕ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಪುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ 09-09-2024ರಂದು ಎಮ್ ಜೆ ಸಿ ಯಲ್ಲಿ ನಡೆಯುವ ಜಿಲ್ಲಾಮಟ್ಟದ ಪುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. 7ನೆ ತರಗತಿ ವಿದ್ಯಾರ್ಥಿಗಳಾದ ಪ್ರತ್ಯುಷ್ ಭಂಡಾರಿ ಬೆಸ್ಟ್ ಗೋಲ್ ಕೀಪರ್ ಪ್ರಶಸ್ತಿಯನ್ನು ಮತ್ತು ಲೈನಲ್ ಅರಾನ್ಹ ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.ವಿಜೇತ ವಿಧ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂಧಿಸಿದರು.













