ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ,ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ

ಬೆಳ್ಮಣ್: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಕಳ ಶಿಕ್ಷಣಾಧಿಕಾರಿಗಳ ಇಲಾಖೆ ವತಿಯಿಂದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆ ಬೆಳ್ಮೆಣ್ ನಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಜೆಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಹೈಸ್ಕೂಲ್ ಬಾಲಕರ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ, ಹೈ ಸ್ಕೂಲ್ ಬಾಲಕಿಯರ ವಿಭಾಗ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದೆ.

ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಮತ್ತು ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.













