
ಮಂಗಳೂರು: ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮೊಂಥೆರೋ ಆಗಸ್ಟ್ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದು ಇದೀಗ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.
ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಚರ್ಚ್ ವೆಡ್ಡಿಂಗ್ ಬಳಿಕ ಸ್ಟಾರ್ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್ ಸಹ ಮಾಡಿಕೊಂಡಿದ್ದಾರೆ.













