
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದಲ್ಲಿ ಸುಪ್ರೀಂ ಕೋರ್ಟ್ ಆರಂಭವಾಗಿ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ, ವಾರ್ಷಿಕೋತ್ಸವದ ನೆನಪಿಗಾಗಿ ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ ಸಿದ್ಧಪಡಿಸಿದ ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುವ ಹೊಸ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಗಿದೆ. ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್ ಕಟ್ಟಡ ಮತ್ತು ಸಂವಿಧಾನವನ್ನು ಒಳಗೊಂಡಿದ್ದು ಈ ವೇಳೆ ಸಂಸದ ಅರ್ಜುನ್ ಮೇಘವಾಲ್, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಉಪಸ್ಥಿತರಿದ್ದರು.













