
ಶಿಕ್ಷಣ ಇಲಾಖೆಯ ವತಿಯಿಂದ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ ಆಯೋಜಿಸಿದ ಕಾರ್ಕಳ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜು ಕಾರ್ಕಳದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನೀಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್,ದೈಹಿಕ ಶಿಕ್ಷಣ ಶಿಕ್ಷಕಿ ಪ್ರಿಯಾ ಪ್ರಭು , ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆ ಪೆರ್ವಾಜೆಯ ದೈಹಿಕ ಶಿಕ್ಷಕಿ ವೇದಾವತಿ ಉಪಸ್ಥಿತರಿದ್ದರು.













