
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದಿನಿಂದ 2 ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಭಾಗಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.













