ಗೃಹ ಸಚಿವರಿಗೆ ಪತ್ರ ಬರೆದ,ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್ ಮಾಫಿಯ ಹಾವಳಿ ಹೆಚ್ಚಾಗುತ್ತಿದ್ದು ಅತ್ಯಾಚಾರ ಮುಂತಾದ ಪ್ರಕರಣಗಳಲ್ಲಿ ಮಾದಕ ದ್ರವ್ಯಗಳ ಮಾಫಿಯಾದ ಪಾತ್ರ ಸ್ಪಷ್ಟವಾಗಿ ಗೋಚರಿಸುತ್ತಿದೆ. ಡ್ರಗ್ಸ್ ಮಾಫಿಯಾದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೊಲೆ, ದರೋಡೆ, ಅತ್ಯಾಚಾರ ಮುಂತಾದ ಪ್ರಕರಣಗಳು ಹೆಚ್ಚಾಗುತ್ತಿದ್ದು ವಿದ್ಯಾರ್ಥಿಗಳು ಮತ್ತು ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಮತ್ತು ಕರಾವಳಿ ಪೊಲೀಸ್ ವಿಭಾಗದ ಮೂಲಕ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.













