
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ. ಕಾರ್ಕಳ ಹಾಗೂ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಕಾರ್ಕಳ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭವು ಕಾರ್ಕಳ ಜ್ಞಾನಸುಧಾ ಆಂಗ್ಲ ಪ್ರೌಢ ಶಾಲೆಯಲ್ಲಿ ದಿನಾಂಕ 11-09-2024ರಂದು ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಮದ್‌ಭುವನೇಂದ್ರ ಪ್ರೌಢ ಶಾಲೆಯ ಪ್ರಾಂಶುಪಾಲರಾದ ನಾರಾಯಣ ಶೆಣೈ ಅವರು ಪ್ರಾಸ್ತವಿಕ ಮಾತುಗಳನ್ನಾಡಿ ವಿಜೇತರನ್ನು ಅಭಿನಂದಿಸಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವಿಚಂದ್ರ ಕಾರಂತ, ಉಪ ಪ್ರಾಂಶುಪಾಲೆಯಾದ ವಾಣಿ.ಕೆ., ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಜ್ಯೋತಿ ಪದ್ಮನಾಭ ಭಂಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಜೆಕಾರು ಚರ್ಚ್ ಆಂಗ್ಲ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದೊಕೊಂಡರೆ, ಎಚ್.ವಿ.ಎಸ್. ಪ್ರೌಢ ಶಾಲೆ ಕುಚ್ಚೂರು ಬಾಲಕರ ವಿಭಾಗದ ಹಾಗೂ ಎಸ್.ಎನ್.ವಿ. ಪ್ರೌಢ ಶಾಲೆ ಹಿರಿಯಂಗಡಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಕಾರ್ಯಕ್ರಮದಲ್ಲಿ ಡೀನ್ ಸ್ಟುಡೆಂಟ್ಸ್ ಅಫೇರ್ ಶಕುಂತಲಾ ಎಂ ಸುವರ್ಣ, ಅಕಾಡೆಮಿಕ್ ಅಡ್ವೈಸರ್ ಶಾರದಾ ಅಂಬರೀಶ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಅರುಣ್ ಕುಮಾರ್, ಸೌಜನ್ಯ ಹೆಗ್ಡೆ, ರೇಶ್ಮಾ ಸಲೀಸ್, ಕಿರಣ್ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಕು. ದರ್ಶಿನಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.













