
ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಚೇರಿ ರಜತಾದ್ರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬ್ರಹ್ಮಾವರ ವಲಯ ಮತ್ತು ಬ್ರಹ್ಮಾವರ ಎಸ್ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರ ಇವರು ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ರಜತ್ ಮತ್ತು ಪ್ರದ್ಯೋತ್ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು ಜೆಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾನಿ, ದೈಹಿಕ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.































































































































