
ಪುಣೆ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಂಬೈ – ಬೆಂಗಳೂರು ಹೆದ್ದಾರಿ ಈಗಾಗಲೇ ದಟ್ಟಣೆಯಿಂದ ಕೂಡಿದ್ದು ಹೀಗಾಗಿ ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ ಪ್ರೆಸ್ ವೇ ನಿರ್ಮಿಸಲಾಗುವುದು.
ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭ ಆಗುವ ನಿರೀಕ್ಷೆ ಇದೆ ಎಂದಿದ್ದಾರೆ.’ಮುಂಬೈನ ಅಟಲ್ ಸೇತುವೆಯಿಂದ ಈ ಹೊಸ ರಸ್ತೆ ಶುರುವಾಗಲಿದ್ದು, ಪುಣೆ ರಿಂಗ್ ರಸ್ತೆ ಮೂಲಕ ಸಾಗುತ್ತದೆ. ಜತೆಗೆ ಛತ್ರಪತಿ ಸಂಭಾಜಿನಗರವನ್ನು ಹಾದು ಹೋಗುತ್ತದೆ. ಇದು ಹಾಲಿ ರಸ್ತೆಗೆ ಬದಲಿಯಾಗಲಿದೆ. ಈ ರಸ್ತೆ ನಿರ್ಮಾಣದಿಂದ ಹಾಲಿ ಮುಂಬೈ-ಪುಣೆ ಎಕ್ಸ್‌ಪ್ರೆಸ್ ವೇನ ಶೇ.50 ರಷ್ಟು ವಾಹನಗಳು ಹೊಸ ಹೆದ್ದಾರಿಗೆ ವರ್ಗಾವಣೆಯಾಗಲಿವೆ. ಇದರ ಟೆಂಡರ್ ಆಹ್ವಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಮುಂದಿನ 6 ತಿಂಗಳಿನಲ್ಲಿ ಕೆಲಸ ಶುರುವಾಗಲಿದೆ’ ಎಂದು ಮಾಹಿತಿ ನೀಡಿದರು.













