
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದು ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
ಒನ್ ನೇಷನ್ ಒನ್ ಎಲೆಕ್ಷನ್ ವಿಚಾರ ಸಂಬಂಧ ಮಾತನಾಡಿದ ಸಚಿವರು, ಇನ್ನೂ ಬಹಳಷ್ಟು ವಿವರಣೆ ಅದರಿಂದ ಬರಬೇಕಾಗುತ್ತದೆ. ಕನಿಷ್ಠ 2/3 ಸ್ಟೇಟ್ ಒಪ್ಪಿಗೆ ಸೂಚಿಸಬೇಕಾಗುತ್ತದೆ. ಈಗ ತಾನೇ ರಾಷ್ಟ್ರಪತಿ ಕೋವಿಂದ್ ಅವರು ವರದಿ ಸಲ್ಲಿಸಿದ್ದಾರೆ. ಮುಂದೆ ಏನು ಡೆವಲಪ್ಮೆಂಟ್ ಆಗುತ್ತದೆ ನೋಡೋಣ. ರಾಜ್ಯಕ್ಕೆ ಬಂದ ಮೇಲೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.













