
ಕಾರ್ಕಳ: ಬಾಲಕನೊಬ್ಬ ಆಟವಾಡುತ್ತಿರುವ ಸಂದರ್ಭದಲ್ಲಿ ಹೊಳೆಗೆ ಬಿದ್ದು ಸಾವನಪ್ಪಿದ ಘಟನೆ ಕಾರ್ಕಳದ ಇರ್ವತ್ತೂರಿನಲ್ಲಿ ಸಂಭವಿಸಿದೆ.
ಸಾಣೂರು ಹೈಸ್ಕೂಲಿನ 9ನೇ ತರಗತಿಯ ವಿದ್ಯಾರ್ಥಿ ಚರಣ್ ರಾಜ್ (15) ಶನಿವಾರ ಸಂಜೆ ಹೊಳೆಯಲ್ಲಿ ಮೀನು ಹಿಡಿಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಶಾಂಭವಿ ಹೊಳೆಗೆ ಬಿದ್ದಿದ್ದು ತಕ್ಷಣವೇ ರಕ್ಷಿಸಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಈ ಸಂದರ್ಭದಲ್ಲಿ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.













