
ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪಗಳಿರುವ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸೂಕ್ತ ಎಂದು ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.ಈ ಹಿಂದೆ ರೈಲ್ವೆ ಸಚಿವರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದರು. ರಾಜೀನಾಮೆ ಕೊಡಬೇಕು ಬೇಡವೋ ಎನ್ನುವುದು ಸಿಎಂ ಮತ್ತು ಅಧಿಕಾರಿಗಳಿಗೆ ಸಂಬಂಧಪಟ್ಟ ವಿಷಯ. ಒಂದು ವೇಳೆ ಅವರು ಆರೋಪಿಯಲ್ಲಾ ಎಂದು ತೀರ್ಪು ಬಂದರೆ ಮತ್ತೆ ಸಿಎಂ ಹುದ್ದೆಗೆ ಮರಳಬಹುದು ಎಂದು ಮಂಗಳೂರಿನಲ್ಲಿ ಮಾತನಾಡುವ ಸಂದರ್ಭದಲ್ಲಿ ನ್ಯಾ. ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.













