
ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಇಲ್ಲಿ ಇಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಪ್ರಥಮ ಅಂಗವಾಗಿ ತರಗತಿ ಕೋಣೆಗಳು ಹಾಗೂ ಶಾಲಾ ವಠಾರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ದೀಪವನ್ನು ಬೆಳಗಿಸಿ, ಪುಷ್ಪ ನಮನ ಮಾಡಿ ವಂದನೆಯನ್ನು ಸಲ್ಲಿಸಲಾಯಿತು. ನಂತರ ಮುಖ್ಯ ಶಿಕ್ಷಕರಾದ ಜಗದೀಶ್ ಹೆಗ್ಗಡೆ ಎಲ್ಲಾ ಶಿಕ್ಷಕ ಶಿಕ್ಷಕರ ಹಾಗೂ ವಿದ್ಯಾರ್ಥಿಗಳು ಸೇರಿ ಸರ್ವಧರ್ಮ ಪ್ರಾರ್ಥನೆಯನ್ನು ಸಂಪನ್ನಗೊಳಿಸಿದರು.













