
ನವದೆಹಲಿ: ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದ್ದು ಇದನ್ನು ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಈ ವೇಳೆ ತಿರುಪತಿ ವಿಚಾರದಲ್ಲಿ ರಾಜಕೀಯ ನಾಟಕವನ್ನು ನೋಡಲು ನಾವು ಬಯಸುವುದಿಲ್ಲ. ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ. ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.













