
ಬೆಂಗಳೂರು: ದಿನಕಳೆದಂತೆ ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದು ಈರುಳ್ಳಿ, ಬೆಳ್ಳುಳ್ಳಿ ಬಳಿಕ ಇದೀಗ ಟೊಮೆಟೊ ದರದಲ್ಲಿ ಏರಿಕೆಯಾಗಿದೆ.
ಅಕಾಲಿಕ ಮಳೆಯಿಂದ ಟೊಮೆಟೊ ಇಳುವರಿ ಕುಸಿತಗೊಂಡಿದ್ದು ಕಳೆದ ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಶುಕ್ರವಾರದಿಂದ ಕೆಜಿಗೆ 80 ರೂ. ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದೆ.
ಈಗ ನವರಾತ್ರಿ ಹಬ್ಬ ಆರಂಭಗೊಂಡಿದ್ದು ಬೇಡಿಕೆ ಜಾಸ್ತಿ ಇದೆ. ಪೂರೈಕೆ ಕಡಿಮೆ ಇರುವ ಕಾರಣ ಟೊಮೆಟೊ ಬೆಲೆ ದಿಢೀರ್ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.













