
ಬೆಂಗಳೂರು: ನವಂಬರ್ 1, ಕನ್ನಡ ರಾಜ್ಯೋತ್ಸವದಂದು, ರಾಜ್ಯದ ಶಾಲಾ ಕಾಲೇಜು, ಕಂಪನಿ ,ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ವರ್ಷ, ನಾವು 50ನೇ ವರ್ಷದ ರಾಜ್ಯೋತ್ಸವ ಆಚರಿಸುತಿದ್ದೇವೆ. ಇದನ್ನು ಸ್ವಾತಂತ್ರ್ಯ ದಿನದ ರೀತಿ ಸಂಭ್ರಮದಿಂದ ರಾಜ್ಯದ ಜನರು ಆಚರಿಸಬೇಕು. ಖಾಸಗಿ ಮತ್ತು ಸರಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಆರಿಸಬೇಕು. ಇನ್ನು ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಮಾಡಿದ್ದನ್ನು ಕನ್ನಡ ಸಂಘಟನೆಗಳು ದುರುಪಯೋಗ ಮಾಡಿಕೊಳ್ಳಬಾರದು. ಕಾರ್ಖಾನೆ ಕಂಪನಿ ಹಾಗೂ ಜನರ ಮೇಲೆ ಒತ್ತಡ ಹೇರುವಂತಿಲ್ಲ. ಒಂದು ವೇಳೆ ಇಂಥ ವಿಚಾರಗಳು ಗಮನಕ್ಕೆ ಬಂದಲ್ಲಿ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದ್ದಾರೆ.













