
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ವರದಿಯಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಸೆಲ್ಸಿಯಸ್













