29.1 C
Udupi
Sunday, April 26, 2026
spot_img
spot_img
HomeBlogಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ

ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ

ಮುಂಬೈ: ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ Y+ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗ ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಪೊಲೀಸ್ ಬೆಂಗಾವಲು ವಾಹನ ಇರಲಿದೆ. ಎಲ್ಲಾ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಪೊಲೀಸ್‌ ಸಿಬ್ಬಂದಿ ಅವರ ಜೊತೆಯಲ್ಲಿದ್ದಾರೆ. ಸಲ್ಮಾನ್ ಖಾನ್ ಅವರು ಚಿತ್ರೀಕರಣಕ್ಕಾಗಿ ಭೇಟಿ ನೀಡುವ ಯಾವುದೇ ಪ್ರದೇಶದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಅವರ ಇರುವಿಕೆಯ ಬಗ್ಗೆ ಸೂಚನೆ ನೀಡಲಾಗುತ್ತದೆ. ಪೊಲೀಸ್ ತಂಡವು ಶೂಟಿಂಗ್ ಸ್ಥಳವನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಗಾರಿಕೆಯನ್ನು ವಹಿಸಿಕೊಂಡ ನಂತರ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎನ್‌ಸಿಪಿ ನಾಯಕ ಸಲ್ಮಾನ್‌ ಖಾನ್‌ ಅವರ ಜೊತೆ ನಿಕಟ ಸಂಬಂಧವನ್ನು ಹೊಂದಿದ್ದರು. ಕಳೆದ ಹಲವು ವರ್ಷಗಳಿಂದ ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಹಲವಾರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.

ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್‌ಹೌಸ್‌ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ 18 ನೇ ಸೀಸನ್‌ನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದು ಮುಂಬರುವ ವೀಕೆಂಡ್ ಕಾ ವಾರ್ ಸಂಚಿಕೆಗಾಗಿ ಸಲ್ಮಾನ್ ಖಾನ್ ಚಿತ್ರೀಕರಣ ಮಾಡುವಾಗ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗುತ್ತದೆ ಎಂದು ತಿಳಿದು ಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page