
ಮುಂಬೈ: ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ಟಾಟ ಅಕ. 9ರಂದು ಕೊನೆ ಉಸಿರಳೆದಿದ್ದು ಅವರ ಅಂತಿಮ ವಿಧಿ ವಿಧಾನಗಳನ್ನು ಮುಂಬೈನ. ಚಿತಾಗಾರದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು.
ಇದೀಗ ಅವರ ಚಿತಾಬಸ್ಮವನ್ನು ಅವರ ಇಚ್ಛೆಯಂತೆ, ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಕುಟುಂಬ ವರ್ಗ ನಿರ್ಧರಿಸಿದೆ. ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ ಹಡಗಿನಲ್ಲಿ ಮೆರವಣಿಗೆಯ ಮೂಲಕ, ಕೊಂಡೊಯ್ದು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲಾಗುವುದು ಈ ಸಂದರ್ಭ ಅವರ ಕುಟುಂಬ ವರ್ಗ ಮತ್ತು ಸ್ನೇಹಿತರು ಭಾಗಿಯಾಗಲಿದ್ದಾರೆ ಎಂದು ಕುಟುಂಬ ಮೂಲಗಳಿಂದ ವರದಿಯಾಗಿದೆ.













