
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.
ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ. ಕೊಡಿ, ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತಲೂ ಕೆಟ್ಟದಾಗಿರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ 60 ಶೂಟರ್ಗಳನ್ನು ನೇಮಿಸಿಕೊಂಡಿದ್ದು, ಖಾನ್ ಸುರಕ್ಷತೆ ಕುರಿತು ಗಂಭೀರ ಕಳವಳ ಉಂಟಾಗಿದೆ. ಈಗಾಗಲೇ ಪದೇ ಪದೇ ಬೆದರಿಕೆಯೊಡ್ಡುತ್ತಿರುವುದರಿಂದ ಸಲ್ಮಾನ್ ಖಾನ್ ಸುತ್ತ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ ಹಾಗೂ ಮುಂಬೈ ಪೊಲೀಸರು ಈ ಬೆದರಿಕೆ ಕುರಿತು ತನಿಖೆ ಆರಂಭಿಸಿದ್ದಾರೆ.













