31.9 C
Udupi
Saturday, March 14, 2026
spot_img
spot_img
HomeBlogಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿ ಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿಕೆ ನೀಡಿದ್ದು ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಿನ್ನೆಯ ಕಾರ್ಯಕ್ರದಲ್ಲಿ ನಾನು ಇರಲಿಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. ಆ ರೀತಿ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಜನತೆಗೆ ದೀಪಾವಳಿಯ ಶುಭಾಶಯ ಕೋರಿ ವಕ್ಫ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿ ಕಾಲದಲ್ಲೂ ನೋಟೀಸ್ ಕೊಟ್ಟಿದ್ದರೂ ಅದಕ್ಕೇನು ಹೇಳುತ್ತಾರೆ? 200ಕ್ಕೂ ಹೆಚ್ಚು ನೋಟಿಸ್ ಕೊಟ್ಟಿದ್ದರು. ಇಂತಹ ರಾಜಕೀಯ ಬಿಜೆಪಿ ಮಾಡಬಾರದು. ಅವರ ಕಾಲದಲ್ಲಿಯೇ ನೋಟಿಸ್ ಕೊಡುವುದಕ್ಕೆ ಆರಂಭ ಆಗಿದ್ದು, ನಾನು ಈಗಾಗಲೇ ಎಲ್ಲಾ ನೋಟಿಸ್ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದೇನೆ. ಯಾರನ್ನು ಒಕ್ಕಲೆಬ್ಬಿಸುವುದಿಲ್ಲ. ಇದರಲ್ಲಿ ಇನ್ನೇನು ವಿವಾದವಿಲ್ಲ. ಯಾವುದೇ ಜಿಲ್ಲೆಯಲ್ಲಿ ನೋಟಿಸ್ ಕೊಟ್ಟಿದ್ದರೂ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page