ಭಾಷಣ ಮತ್ತು ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಸಾಧನೆ

ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ ಕಾರ್ಕಳ ಇಲ್ಲಿಯ ವಿದ್ಯಾರ್ಥಿಗಳುಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಇವರ ಸಹಯೋಗದಲ್ಲಿ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಬ್ರೋವಿನ್ ಅಗೇರ 10ನೇ ತರಗತಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಪ್ರೌಢಶಾಲೆ ಹಿರಿಯಂಗಡಿ ಕಾರ್ಕಳ ಇವರು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಹಾಗೂ
ಜಿಲ್ಲಾ ಮಟ್ಟದ ವೈಯಕ್ತಿಕ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಸೃಜನ್ ಬಂಗೇರ 10ನೇ ತರಗತಿ ಸ್ವಸ್ತಿಶ್ರೀ ನೇಮಿಸಾಗರ ವರ್ಣಿಜಿ ಪ್ರೌಢಶಾಲೆ ಹಿರಿಯಂಗಡಿ ಕಾರ್ಕಳ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಇಬ್ಬರು ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಉಷಾ ಪಡಿವಾಳ್ ಹಾಗೂ ಅಧ್ಯಾಪಕ ವೃಂದ ದವರು ಅಭಿನಂದಿಸಿರುತ್ತಾರೆ.









