28.2 C
Udupi
Wednesday, April 29, 2026
spot_img
spot_img
HomeBlogಮಂಗಳೂರು: ಪತ್ನಿ ಹಾಗೂ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಪತ್ನಿ ಹಾಗೂ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಮಂಗಳೂರು ಹೊರವಲಯದ ಪಕ್ಷಿಕೆರೆಯಲ್ಲಿ ಪತ್ನಿ ಹಾಗೂ ಮಗುವನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಶರಣಾದ ಘಟಣೆ ಸಂಭವಿಸಿದೆ.

ಸಹಕಾರಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್‌ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ಶುಕ್ರವಾರವೂ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನಸ್ತಾಪದ ಹಿನ್ನೆಲೆ ಶುಕ್ರವಾರ ರಾತ್ರಿಯೂ ಮಗ, ಸೊಸೆ ಹಾಗೂ ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಟ್ ಭಾವಿಸಿ ಶನಿವಾರ ಕೂಡ ಎಂದಿನಂತೆಯೇ ಹೋಟೆಲ್‌ಗೆ ತೆರಳಿದ್ದರು. ಇತ್ತ ಕಾರ್ತಿಕ್ ಮೃತದೇಹ ಪತ್ತೆಯಾದ ಕಾರಣ ಆತನ ವಿಳಾಸ ಹುಡುಕಿಕೊಂಡು ಪೊಲೀಸರು ಮನೆಗೆ ಬಂದಿದ್ದಾರೆ. ಕೋಣೆಯ ಬಾಗಿಲು ತೆರೆದು ನೋಡಿದಾಗ ಪತ್ನಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರಾಗಿದ್ದು ಮಾತುಕತೆ ಇಲ್ಲದ ಕಾರಣ ಸೊಸೆ ಹಾಗೂ ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ತಿಳಿದಿರಲಿಲ್ಲ.

ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ತಿಕ್ ತನ್ನ ಹೆಂಡತಿ ಹಾಗೂ ಮಗುವನ್ನು ಗ್ಲಾಸ್ ಪೀಸ್‌ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಕಾರ್ತಿಕ್ ಮೃತದೇಹ ಪತ್ತೆಯಾಗಿತ್ತು.ನಿನ್ನೆ ಮಧ್ಯಾಹ್ನದ ವೇಳೆಗೆ ಕಾರ್ತಿಕ್ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾರ್ತಿಕ್ ಕುಟುಂಬಕ್ಕೆ ಮೂರು ವರ್ಷದಿಂದ ತಂದೆ-ತಾಯಿ ಜೊತೆ ಮಾತುಕತೆ ಇರಲಿಲ್ಲ. ಶುಕ್ರವಾರ ರಾತ್ರಿ ಕಾರ್ತಿಕ್ ಕುಟುಂಬ ಹೊರಗೆ ಹೋಗಿರಬಹುದು ಎಂದು ಕಾರ್ತಿಕ್ ತಂದೆ ಭಾವಿಸಿದ್ದರು. ಇಂದು ಮಧ್ಯಾಹ್ನವೇ ಅವರಿಗೆ ವಿಷಯ ಗೊತ್ತಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ಕಾರ್ತಿಕ್ ಆರ್ಥಿಕ ಸಮಸ್ಯೆಯಿಂದ ಇರುವುದು ಗಮನಕ್ಕೆ ಬಂದಿದ್ದು ವಾಷ್‌ರೂಂನ ಕಿಟಕಿ ಗ್ಲಾಸ್ ಒಡೆದು ಪತ್ನಿ, ಮಗುವಿನ ಹತ್ಯೆ ಮಾಡಿದ್ದಾನೆ. ಇಬ್ಬರ ದೇಹದ ಬೇರೆ ಬೇರೆ ಭಾಗದಲ್ಲಿ ಗಾಯಗಳಾಗಿದ್ದು ಬಳಿಕ ಕೋಣೆಯಲ್ಲೇ ಫ್ಯಾನ್‌ಗೆ ನೇಣುಹಾಕಲು ಯತ್ನಿಸಿದ್ದಾನೆ. ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್ ಕೃತ್ಯ ಎಸಗುವ ಮುನ್ನ ಸುಧೀರ್ಘ ಡೆತ್‌ನೋಟ್ ಬರೆದಿದ್ದಾನೆ. ತನ್ನ ಅಂತ್ಯಸಂಸ್ಕಾರ, ಆಸ್ತಿ ಯಾರ ಪಾಲಾಗಬೇಕೆಂದು ಡೆತ್ ನೋಟ್‌ನಲ್ಲಿದೆ. ತನ್ನ ತಂದೆ ತಾಯಿ ಅಂತ್ಯಸಂಸ್ಕಾರ ಮಾಡಬಾರದು ಎಂದು ಉಲ್ಲೇಖಿಸಿದ್ದು ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಡೆತ್‌ನೋಟ್ ನಲ್ಲಿ ಬರೆದಿದ್ದಾನೆ. ಪತ್ನಿ ಪ್ರಿಯಾಂಕ ಅವರ ಮೃತ ದೇಹವನ್ನು ಆಕೆಯ ಹೆತ್ತವರು ಬಂದ ಬಳಿಕ ಪೋಸ್ಟ್ಮಾರ್ಟಂಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಮೀಷನರ್ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page