
ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನ ಎನ್ ಐ ಸಿ ಯು ನ ಶಿಶು ವಿಭಾಗದಲ್ಲಿ ಶುಕ್ರವಾರ ಬೆಂಕಿ ಅವಘಡ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಮಕ್ಕಳು ಸಜೀವ ದಹನಗೊಂಡಿದ್ದಾರೆ. 37 ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ಶಿಶು ವಿಭಾಗದಲ್ಲಿ 50ಕ್ಕೂ ಹೆಚ್ಚು ಮಕ್ಕಳು ಚಿಕಿತ್ಸೆಗಾಗಿ ದಾಖಲಾಗಿದ್ದರು ಎನ್ನಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ನವಜಾತ ಶಿಶುಗಳ ತೀವ್ರ ನಿಘ ಘಟಕದಲ್ಲಿ ರಾತ್ರಿ 10:30ಯ ಸಮೀಪ ಬೆಂಕಿ ಕಾಣಿಸಿಕೊಂಡಿದೆ.
ಉತ್ತರ ಪ್ರದೇಶದ ಸಿಎಂ ಆದ ಯೋಗಿ ಸ್ಥಳಕ್ಕಾಗಿಮಿಸಿ, ಪರಿಹಾರ ಕಾರ್ಯ ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಅವಘಡಕ್ಕೆ ಸಂಬಂಧಿಸಿದಂತೆ 12 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.



















