ಶಿಕ್ಷಣ ಸಚಿವರ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತ,
ಬೆಂಗಳೂರು: ಬುಧವಾರ ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ವಿದ್ಯಾರ್ಥಿಯೊಬ್ಬ ಹೇಳಿದ್ದು ಇದರಿಂದ ಕೋಪಗೊಂಡ ಶಿಕ್ಷಣ ಸಚಿವರು ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದರ ಬೆನ್ನಲ್ಲಿಯೇ ಶಿಕ್ಷಣ ಸಚಿವರ ಈ ನಿರ್ಧಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.
ವಿದ್ಯಾರ್ಥಿಯೊಬ್ಬ ಸಚಿವರಿಗೆ ಕನ್ನಡ ಬರಲ್ಲ ಎಂದು ಹೇಳಿದಾಗ ‘ಯಾರೋ ಅದು ಹೇಳಿದ್ದು…ಏನಂತ ಹೇಳಿದ್ರು.. ನಾನೇನು ಉರ್ದು ಮಾತಾಡಿದ್ನಾ… ಕನ್ನಡದಲ್ಲೇ ಮಾತಾಡಿದ್ದು…’ ಎಂದು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ತಕ್ಷಣವೇ ಪಕ್ಕದಲ್ಲಿ ಕುಳಿತಿದ್ದ ಅಧಿಕಾರಿಗಳಿಗೆ ಯಾರು ಅಂತ ನೋಡಿ ರೆಕಾರ್ಡ್ ಮಾಡಿ ಆ ಹುಡುಗನ ಮೇಲೆ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ್ದಾರೆ.