
ಮೂಡುಬಿದಿರೆ: ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಯೋರ್ವ ಕಿಟಕಿಗೆ ನೇಣು ಬಿಕಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು ಸಮೀಪದ ಹೊಸೂರು ನಿವಾಸಿ ಶಶಾಂಕ್ (20) ದ್ವಿತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಎನ್ನಲಾಗಿದೆ.
ಶಶಾಂಕ್ ಬಾಲಕರ ವಸತಿ ನಿಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








































