
ಕಾರ್ಕಳ: ಖಾಸಗಿ ವಿದ್ಯಾ ಸಂಸ್ಥೆಯ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಶಾಲಾ ಬಸ್ ಬಜಗೋಳಿಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಸಂದರ್ಭ ಜೋಡುಕಟ್ಟೆಯ ಬಳಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಅಜಿತ್ (24) ಮೃತಪಟ್ಟಿದ್ದಾನೆ. ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.






















































































