ದಾಳಿಯ ಹಿಂದೆ ಬಿಜೆಪಿ ಕೈವಾಡ ಆಪ್ ನಾಯಕನ ಆರೋಪ

ನವದೆಹಲಿ: ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಪಾದಯಾತ್ರೆ ನಡೆಸುತ್ತಿರುವ ವೇಳೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ ಎರಚಿರುವ ಘಟನೆ ನಡೆದಿದೆ.
ಅರವಿಂದ್ ಕೇಜ್ರಿವಾಲ್ ತನ್ನ ಬೆಂಬಲಿಗರೊಡನೆ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿಸಲಾಗುತ್ತಿದ್ದು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಫ್ ನಾಯಕ ಸೌರಭ್ ಬಾರದ್ವಾಜ್,”ಈ ದಾಳಿಯ ಹಿಂದೆ ಬಿಜೆಪಿಯ ಕೈವಾಡವಿದೆ. ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಈ ಬಗ್ಗೆ ಕೇಂದ್ರ ಸರಕಾರ ಹಾಗೂ ಗೃಹ ಸಚಿವರು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದ್ದಾರೆ.



















