
ಬೆಂಗಳೂರು : ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ ‘ಶೀಘ್ರದಲ್ಲೇ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ಸುಳಿವು ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಸದ್ಯದಲ್ಲೇ ನಡೆಯಲಿರುವುದಂತೂ ನಿಜ. ಅದನ್ನು ನಿಲ್ಲಿಸಲು ಆಗುವುದಿಲ್ಲ. ಕೇವಲ ಚುನಾವಣೆ ಬಂದಾಗ ಸಿದ್ಧತೆ ಮಾಡಿಕೊಳ್ಳುವುದಲ್ಲ. ಒಂದು ಚುನಾವಣೆ ಮುಗಿದ ಮರು ದಿನದಿಂದಲೇ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿನ ಯಶಸ್ಸು ಮುಂದುವರೆಸಿಕೊಂಡು ಹೋಗಲು ಪಕ್ಷ ಸಂಘಟನೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಪ್ರತಿ ವಿಭಾಗವಾರು ತಲುಪಿಸಲು ಪಕ್ಷ ತೀರ್ಮಾನ ಮಾಡಿದೆ ಎಂದು ತಿಳಿಸಿದರು.



















