
ಇದೇ ಡಿಸೆಂಬರ್ 22ರಂದು ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.
ಹೈದರಾಬಾದ್ ಮೂಲದ ಪೋಸಿಡೆಕ್ಸ್ ಟೆಕ್ನಾಲಜೀಸ್ ಎಂಬ ಖಾಸಗಿ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ವೆಂಕಟ ದತ್ತ ಸಾಯಿ ಎಂಬವರನ್ನು ವಿವಾಹವಾಗಲಿದ್ದಾರೆ ಎಂದು ಸಿಂಧು ತಂದೆ ಪಿವಿ ರಮಣ ಮಾಹಿತಿ ನೀಡಿದ್ದಾರೆ.
ಡಿ.20 ರಿಂದ ಮದುವೆ ಶಾಸ್ತ್ರಗಳು ಶುರುವಾಗಲಿದ್ದು ಡಿ.22 ರಂದು ಉದಯಪುರದಲ್ಲಿ ಮದುವೆ ನಡೆಯಲಿದೆ. ಇನ್ನೂ ಡಿ.24 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಡಿ.01 ಭಾನುವಾರದಂದು ಲಕ್ನೋದಲ್ಲಿ ನಡೆದ 2024ರ ಸೈಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ ಸಿಂಧು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.



















