
ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಕೊಂಚ ಕಡಿಮೆಯಾದರೂ ಐದು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ವಿವಿಧಡೆ ಡಿಸೆಂಬರ್ 12ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ವಿಜಯಪುರ ,ರಾಯಚೂರು ,ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















