
ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳು ಎಂದು ಗುರುತಿಸಲ್ಪಡುವ,ಹಿರಿಯ ಮುತ್ಸದ್ದಿ, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾಗಿದ್ದ ಸರಳ ಸಜ್ಜನ ಎಸ್.ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ.
ಅಗಲಿದ ಅವರ ದಿವ್ಯಾತ್ಮಕ್ಕೆ ಪರಮಾತ್ಮ ಚಿರಶಾಂತಿ ಕರುಣಿಸಲಿ,ಅವರ ಅಪಾರ ಅಭಿಮಾನಿಗಳಿಗೆ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಮಾಜಿ ಸಚಿವ,ಶಾಸಕ ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.



















