
ಬೆಂಗಳೂರು: ಡಿ.19ರಂದು ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಎಂಎಲ್‌ಸಿ ಸಿ.ಟಿ ರವಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ವಿಚಾರದ ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನ ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತೆ. ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ಬರುತ್ತೇನೆ ಎಂದು ಹೇಳಿದ್ದಾರೆ.
ಸಿ.ಟಿ ರವಿ ಈ ರೀತಿ ಅಂದಿದ್ದಾರೆ ಅಂತಾ ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



















