
ಬೆಂಗಳೂರು: ಬಿಜೆಪಿ ನಾಯಕ ಸಿಟಿ ರವಿ ಅವರು ವಿಧಾನ ಪರಿಷತ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಅನ್ನೋ ಪ್ರಕರಣವನ್ನು ಇದೀಗ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದ್ದು ಇದನ್ನು ವಿರೋಧಿಸಿರುವ ವಿಪಕ್ಷವು ಸಿಐಡಿ ಅಧಿಕಾರಿಗಳು ಸರ್ಕಾರ ಹೇಳಿದಂತೆ ವರದಿ ಕೊಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ ಏನೇ ತನಿಖೆ ಆದರೂ ಸಭಾಪತಿಯವರೇ ಮಾಡಬೇಕು, ಸಭಾಪತಿ ವ್ಯಾಪ್ತಿಯನ್ನ ಮೀರಿ ಹೋಗೋದು ಸರಿಯಲ್ಲ ಎಂದು ಹೇಳಿದ್ದಾರೆ.



















