
ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 28ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು, ಉಡುಪಿ, ಬೆಳಗಾವಿ, ಹಾವೇರಿ ,ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್




