24.2 C
Udupi
Sunday, February 15, 2026
spot_img
spot_img
HomeBlogಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಿಸಲು ನಿರ್ಧರಿಸಿದ ಕೆಎಂಎಫ್

ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಿಸಲು ನಿರ್ಧರಿಸಿದ ಕೆಎಂಎಫ್

spot_imgspot_img

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟವು ಸಂಕ್ರಾಂತಿ ಹಬ್ಬದ ಬಳಿಕ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲು ನಿರ್ಧರಿಸಿದ್ದು ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.

ಬೆಂಗಳೂರಿನ ಡೈರಿ ಸರ್ಕಲ್ ಬಳಿಯ ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದ್ದು ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತೆ ಎಂದು ಹೇಳಿದರು.

ಪ್ರತಿ ಲೀಟರ್ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದು, ದಿಢೀರ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ.‌ ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡ ಇಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page