
ಹುಬ್ಬಳ್ಳಿ : ಸಾಯಿ ನಗರದಲ್ಲಿ ಡಿಸೆಂಬರ್ 22ರಂದು ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವಿನೊಂದಿಗೆ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಶಂಕರ್ (29) ಮೃತಪಟ್ಟ ಅಯ್ಯಪ್ಪ ಮಾಲಾಧಾರಿ. ಇನ್ನು ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಂಕರ್ ಬಾಲ್ಯದಿಂದಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದು ದೊಡ್ಡಮ್ಮನ ಆರೈಕೆಯಲ್ಲಿ ಬೆಳೆದಿದ್ದರು ಇವರು ಮೊದಲ ಬಾರಿಗೆ ಅಯ್ಯಪ್ಪನ ಮಾಲೆ ಧರಿಸಿದ್ದರು ಎನ್ನಲಾಗಿದೆ.




