
ಉಡುಪಿ: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಶುಭಾಶಯ ಕೋರುವ ನೆಪದಲ್ಲಿ ಹಾನಿಕಾರಕ ಎಪಿಕೆ ಫೈಲ್ ಗಳ ಕುರಿತು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.
ಸೈಬರ್ ಕ್ರಿಮಿನಲ್ ಗಳು ಸಾರ್ವಜನಿಕರ ಮೊಬೈಲ್ ಗಳಿಗೆ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆ ಹೆಚ್ಚಾಗಿದ್ದು ಈ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಮಾಹಿತಿ ನೀಡಿದ್ದಾರೆ.