
ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ರಾಜ್ಯದ ಸಚಿವ ಸಂಪುಟ ಅನುಮೋದನೆ ನೀಡಿದ್ದು ಶೇಕಡ 15 ರಷ್ಟು ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ.
ಶಕ್ತಿ ಯೋಜನೆ, ಡಿಜಿಲ್ ದರ ಏರಿಕೆ ಸೇರಿದಂತೆ ಹಲವಾರು ವಿಚಾರಗಳಿಂದ ಅನಿವಾರ್ಯವಾಗಿ ಇದೀಗ ಸರಕಾರ ಬಸ್ ಟಿಕೆಟ್ ದರವನ್ನು ಏರಿಕೆ ಮಾಡಿದೆ.
ಬಿಎಂಟಿಸಿಯಿಂದ 42%, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿಯಿಂದ 25%, ಕೆಎಸ್‌ಆರ್‌ಟಿಸಿ ಮತ್ತು ಕೆಕೆಆರ್‌ಟಿಸಿಯಿಂದ 28% ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು ನಾಲ್ಕು ನಿಗಮಗಳ ಪ್ರಸ್ತಾವನೆಯನ್ನು ಅಳೆದು ತೂಗಿ ಕೊನೆಯದಾಗಿ 15% ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಬಿಜೆಪಿಯವರು ಸಾವಿರಾರು ಕೋಟಿ ಸಾಲ ಉಳಿಸಿ ಹೋಗಿದ್ದಾರೆ, ಹಾಗಾಗಿ ಸಾರಿಗೆ ಸಂಸ್ಥೆಗಳನ್ನು ಉಳಿಸಬೇಕು ಈ ಕಾರಣದಿಂದ ಟಿಕೆಟ್ ದರ ಏರಿಕೆ ಮಾಡಿದ್ದೇವೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.



