- ರೂ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ಇದೆ ಎಂದ ಸಚಿವರು…

ಹೊಸ ವರ್ಷದ ಆರಂಭದಲ್ಲೇ ಬಸ್ ಟಿಕೆಟ್ ದರ ಏರಿಕೆಯ ಮೂಲಕ ರಾಜ್ಯ ಸರಕಾರ ಜನರಿಗೆ ಶಾಕ್ ನೀಡಿದೆ.
ಇದೀಗ ಹಾಲಿನ ದರ ಏರಿಕೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಹಾಲಿನ ದರ ರೂ. 10 ಏರಿಕೆಗೆ ರೈತರಿಂದ ಬೇಡಿಕೆ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು ,ಈ ಹಿನ್ನಲೆ ಹಾಲಿನ ದರ ಏರಿಕೆಗೆ ಒತ್ತಾಯಿಸಿದ್ದಾರೆ. ಆದರೆ ನಾವಿನ್ನು ಈ ವಿಷಯದ ಕುರಿತು ಚರ್ಚೆ ನಡೆಸುತ್ತಿದ್ದೇವೆ. ಚರ್ಚೆಯ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ ವೆಂಕಟೇಶ್ ಹಾಲಿನ ಬೆಲೆ ಏರಿಕೆಯ ಸುಳಿವು ನೀಡಿದ್ದಾರೆ.
ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ರೈತರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಆದ್ದರಿಂದ ಎಷ್ಟು ಏರಿಕೆ ಮಾಡಬೇಕು ಎನ್ನುವುದು ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ.



