
ಶಿವಮೊಗ್ಗ: 88 ವರ್ಷ ವಯಸ್ಸಿನ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಹಿತಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ವಿಧಿವಶರಾಗಿದ್ದಾರೆ.



