
ವಿಜಯಪುರ : ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಸ್ ಪ್ರಯಾಣ ದರ ಏರಿಕೆ ವಿಚಾರಕ್ಕೆ ಸರ್ಕಾರದ ವಿರುದ್ಧ ವಿರೋಧ ವ್ಯಕ್ತಪಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದ್ದು ಈ ವೇಳೆ ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹಾಕಿದ್ದಾರೆ. ಗಂಡಸರು ಏನು ಪಾಪಾ ಮಾಡಿದ್ಧಾರೆ. ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಬಾರದು. ಇದರಿಂದ ಹೆಣ್ಣು ಮಕ್ಕಳಿಗೂ ಅನ್ಯಾಯವಾಗುತ್ತದೆ. ಮಕ್ಕಳು, ಮನೆಯ ಯಜಮಾನರಿಗೂ ಅನ್ಯಾಯವಾಗುತ್ತದೆ. ಇವರ ರಕ್ಷಣೆ ಮಾಡಬೇಕೆಂದರೆ ಹೆಣ್ಣು ಮಕ್ಕಳೂ ಸಹ ಕಾಂಗ್ರೆಸ್ಗೆ ಮತ ಹಾಕಬಾರದೆಂದು ಮನವಿ ಮಾಡಿದರು.



