
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯು ಮುಂದಿನ ಮೂರು ದಿನ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿದೆ.
ಕರಾವಳಿ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಿದ್ದು ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದ್ದು ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ.
ಜಿಲ್ಲೆಗಳಲ್ಲಿ ದಾಖಲಾಗಿರುವ ಕನಿಷ್ಠ ಉಷ್ಣಾಂಶ:
ವಿಜಯಪುರ- 10.6 ಡಿ.ಸೆ
ಚಿಕ್ಕಮಗಳೂರು- 10.2 ಡಿ.ಸೆ
ಚಿಂತಾಮಣಿ- 10.8 ಡಿ.ಸೆ
ಬೀದರ್ – 11 ಡಿ.ಸೆ
ದಾವಣಗೆರೆ- 11 ಡಿ.ಸೆ
ಬೆಳಗಾವಿ ಏರ್ಪೋರ್ಟ್- 11.4 ಡಿ.ಸೆ



