
ರಾಯ್ ಪುರ: ಭದ್ರತಾ ಸಿಬ್ಬಂದಿಯಿದ್ದ, ವಾಹನವನ್ನು ನಕ್ಸಲರು ಸ್ಪೋಟಸಿದ್ದು, ಘಟನೆಯಲ್ಲಿ ಎಂಟು ಮಂದಿ ಭದ್ರತಾ ಸಿಬ್ಬಂದಿ ಹಾಗೂ ಓರ್ವ ಚಾಲಕ ಸೇರಿ 9 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ನಕ್ಸಲರು ಐಇಡಿ ಬಳಸಿ ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ಸ್ಪೋಟಿಸಿದ್ದಾರೆ. ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಒಂದು ದಿನದ ಹಿಂದೆಯಷ್ಟೇ ಈ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಮಾವೋವಾದಿಗಳ ನಡುವೆ ಎನ್ಕೌಂಟರ್ ನಡೆದಿದ್ದು, ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದರು. ಈ ದಾಳಿಯ ಪ್ರತಿ ದಾಳಿಯಾಗಿ ನಕ್ಸಲರು ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.



















