ಉಡುಪಿ: ಉದ್ಯಾವರದ ಬಲೈಪಾದೆ ಬಳಿ ಪ್ಲೈವುಡ್ ಕೊಂಡೊಯ್ಯುತ್ತಿದ್ದ ಈಚರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.
ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಎಂಬ ಬೈಕ್ ಸವಾರ ಮೃತಪಟ್ಟಿದ್ದು ಮಧ್ಯರಾತ್ರಿ 1:30ರ ವೇಳೆಗೆ ಈ ರಸ್ತೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಈಚರ್ ವಾಹನ ಬೈಕನ್ನು ಸ್ವಲ್ಪ ದೂರದವರೆಗೆ ಎಳೆದೊಯ್ದಿದೆ. ಈ ವೇಳೆ ಬೆಂಕಿ ಕಾಣಿಸಿಕೊಂಡು ಎರಡು ವಾಹನಗಳು ಸುಟ್ಟು ಕರಕಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



















